Index   ವಚನ - 486    Search  
 
ಗಗನದ ಮೇಘಂಗಳೆಲ್ಲ ಸುರಿದು[ವು] ಭೂಮಿಯ ಮೇಲೆ. ಭೂಮಿ ದಣಿಯುಂಡು ಸಸಿಗಳೆಲ್ಲಾ ಬೆಳೆದವು. ಬಹುವಿಕಾರದಿಂದ ಬೆಳೆದ ಸಸಿ[ಯ], ವಿಕಾರದಿಂದ ಗ್ರಹಿಸುವ ಕಾಮವಿಕಾರಿಗಳು, ಲಿಂಗವನೆತ್ತ ಬಲ್ಲರು ಗುಹೇಶ್ವರಾ?