Index   ವಚನ - 498    Search  
 
ಅಘಟಿತ ಘಟಿತನೆ ವಿಪರೀತ ಚರಿತ್ರನೆ, ಸಾವರ ಕೈಯಲ್ಲಿ ಪೂಜೆಗೊಂಬರೆ ಲಿಂಗಯ್ಯಾ? ಸಾವರ ನೋವರ ಕೈಯಲ್ಲಿ ಪೂಜೆಗೊಂಬುದು ಲಜ್ಜೆ ಕಾಣಾ, ಗುಹೇಶ್ವರಾ.