Index   ವಚನ - 507    Search  
 
ಖೇಚರರಾಗಲಿ ಭೂಚರರಾಗಲಿ ಲಾಂಛನಧಾರಿಯಾಗಲಿ, ಮರಣವಾರಿಗೂ ಮನ್ನಣೆಯಿಲ್ಲ! ಸನಕ ಸನಂದಾದಿಗಳಿಗೂ ಮರಣ ಮನ್ನಣೆಯಿಲ್ಲ. ಇದು ಕಾರಣ, ಗುಹೇಶ್ವರಾ ನಿಮ್ಮ ಶರಣರು ಕಾಲನ ಬಾರಿಗೆ ಕಲ್ಪಿತರಾಗರು!