ವಚನ - 508     
 
ಕಾಮಿಸುವ ಕಲ್ಪಿಸುವ ಬ್ರಹ್ಮನೆಂಬವ ವ್ರತಗೇಡಿ, ವಿಷ್ಣುವೆಂಬವ ಸತ್ತು ಬಿದ್ದ, ರುದ್ರನೆಂಬವ ಅಬದ್ಧ ಅವಿಚಾರಿ! ಅವಿಚಾರದಲ್ಲಿ ಎಲ್ಲರ ಕೊಂದ ಕೊಲೆ, ನಿಮ್ಮ ತಾಗುವುದು ಗುಹೇಶ್ವರಾ.