ವಚನ - 524     
 
ಭವಿಯೆಂಬುದು ಹುಸಿ, ಭಕ್ತಿಯೆಂಬುದು ಉಪದೇಶ. ಶೀಲವೆಂಬುದು ಸಂಕಲ್ಪ, ಸಮತೆಯೆಂಬುದು ಸೂತಕ. ಇಂತೀ ಚತುರ್ವಿಧದೊಳಗಿಲ್ಲ, ಗುಹೇಶ್ವರಾ, ನಿಮ್ಮ ಶರಣ ನಿಸ್ಸೀಮ!