Index   ವಚನ - 552    Search  
 
ಪಂಚಮಹಾಪಾತಕಂಗಳಾವುದೆಂದರಿಯರು. ಭವಿಯ ತಂದು ಭಕ್ತನ ಮಾಡೂದು ಪ್ರಥಮ ಪಾತಕ. ಭಕ್ತರಿಗೆ ಶರಣೆಂಬುದು ದ್ವಿತೀಯ ಪಾತಕ, ಗುರುಕರಣೆವೆಂಬುದು ತೃತೀಯ ಪಾತಕ. ಗುರು ಲಿಂಗ ಜಂಗಮದ ಪ್ರಸಾದವ ಕೊಂಡಡೆ ನಾಲ್ಕನೆಯ ಪಾತಕ. ಗುಹೇಶ್ವರಲಿಂಗದಲ್ಲಿ ಹಿರಿದು ಭಕ್ತಿಯ ಮಾಡೂದು ಪಂಚಮಮಹಾಪಾತಕ.