ವಚನ - 59     
 
ಎತ್ತಣ ಮಾಮರ ಎತ್ತಣ ಕೋಗಿಲೆ! ಎತ್ತಣಿಂದೆತ್ತ ಸಂಬಂಧವಯ್ಯಾ! ಬೆಟ್ಟದ ಮೇಲಣ ನೆಲ್ಲಿಯ ಕಾಯಿ ಸಮುದ್ರದೊಳಗಣ ಉಪ್ಪು, ಎತ್ತಣಿಂದೆತ್ತ ಸಂಬಂಧವಯ್ಯಾ! ಗುಹೇಶ್ವರಲಿಂಗಕ್ಕೆಯೂ ಎನಗೆಯೂ ಎತ್ತಣಿಂದೆತ್ತ ಸಂಬಂಧವಯ್ಯಾ.