ವಚನ - 597     
 
ಅದ್ವೈತನ ಕರಸ್ಥಲದೊಳಗೆ, ಅನಂತನೆಂಬ ಗಿಳಿ ಮೂರ್ತಗೊಂಡು, ಅತೀತ ಅನಾಗತ ವರ್ತಮಾನವೆಂಬ ಕೊರೆಕೂಳನುಂಡು, ಓದಿತ್ತು ಅಗಣಿತ ಪುರಾಣ, ಅನಾಮಯ ಶಾಸ್ತ್ರವನು, ಅನುಪಮ ವೇದವೆಂದು. ನಿಃಸ್ಥಲವ ಸ್ಥಲವಿಡಲು, ನಿರ್ಮಳಾತ್ಮಂಗೆ ಇಹವಿಲ್ಲ ಪರವಿಲ್ಲ! ಆದಿ ಮಧ್ಯಾಂತ ನಿರಾಳ ಗುಹೇಶ್ವರನ ಅನುಭವಿಗೆ ಸರ್ವಾಂಗ ಲಿಂಗವು!