Index   ವಚನ - 6    Search  
 
ನಾದಬಿಂದುಗಳಿಲ್ಲದಂದು ನಿರ್ಭಯನೆಂಬ ಗಣೇಶ್ವರನು, ಉತ್ಪತ್ತಿ ಸ್ಥಿತಿ ಲಯವಿಲ್ಲದಂದು ಅಕ್ಷಯನೆಂಬ ಗಣೇಶ್ವರನು, ಓದು ವೇದಂಗಳಿಲ್ಲದಂದು ಓಂಕಾರನೆಂಬ ಗಣೇಶ್ವರನು, ಯುಗಜುಗಂಗಳಿಲ್ಲದಂದು ಊರ್ಧ್ವಮುಖನೆಂಬ ಗಣೇಶ್ವರನು, ಗುಹೇಶ್ವರಲಿಂಗವಿಲ್ಲದಂದು ನಿರ್ಮಾಯನೆಂಬ ಗಣೇಶ್ವರನು.