ವಚನ - 627     
 
ಎರಡೆಂಬತ್ತು ಕೋಟಿ ವಚನವ ಹಾಡಿ ಹಲವ ಹಂಬಲಿಸಿತ್ತೆನ್ನ ಮನವು, ಮನ ಘನವನರಿಯದು, ಘನ ಮನವನರಿಯದು. ಗುಹೇಶ್ವರನೆಂಬ ಲಿಂಗವನರಿದ ಬಳಿಕ ಗೀತವೆಲ್ಲ ಒಂದು ಮಾತಿನೊಳಗು!