ವಚನ - 631     
 
ಕಕ್ಷೆಯಲ್ಲಿ ಲಿಂಗವ ಧರಿಸಿಕೊಂಡಾತನು ಬ್ರಹ್ಮನು. ಕರಸ್ಥಲದಲ್ಲಿ ಲಿಂಗವ ಧರಿಸಿಕೊಂಡಾತನು ವಿಷ್ಣುವು. ಉತ್ತಮಾಂಗದಲ್ಲಿ ಲಿಂಗವ ಧರಿಸಿಕೊಂಡಾತನು ರುದ್ರನು. ಅಮಳೊಕ್ಯದಲ್ಲಿ ಲಿಂಗವ ಧರಿಸಿಕೊಂಡಾತನು ಈಶ್ವರನು. ಮುಖಸೆಜ್ಜೆಯಲ್ಲಿ ಲಿಂಗವ ಧರಿಸಿಕೊಂಡಾತನು ಸದಾಶಿವನು. ಅಂಗಸೆಜ್ಜೆಯಲ್ಲಿ ಲಿಂಗವ ಧರಿಸಿಕೊಂಡಾತನು ಉಪಮಾತೀತನು- ಇವರೆಲ್ಲರೂ ಬಯಲಲ್ಲಿ ಹುಟ್ಟಿ ಬಯಲಲ್ಲಿ ಬೆಳೆದು, ಬಯಲನೆ ಪೂಜಿಸಿ ಬಯಲಾಗಿ ಹೋದರು. ನಾನು ನಿತ್ಯವ ಪೂಜಿಸಿ ಮಿಥ್ಯವಳಿದ ಇರವಿನಲ್ಲಿ ಸುಖಿಯಾದೆನು ಗುಹೇಶ್ವರಾ.