ವಚನ - 64     
 
ಭವಿಯ ತಂದು ಭಕ್ತನ ಮಾಡಿ, ಪೂರ್ವಾಶ್ರಯವ ಕಳೆದ ಬಳಿಕ, ಮರಳಿ ಪೂರ್ವಾಶ್ರಯವನೆತ್ತಿ ನುಡಿವ, ಗುರುದ್ರೋಹಿಯ ಮಾತ ಕೇಳಲಾಗದು. ಹೆಸರಿಲ್ಲದ ಲಿಂಗಕ್ಕೆ ಹೆಸರಿಡುವ ಲಿಂಗದ್ರೋಹಿಯ ಮಾತ ಕೇಳಲಾಗದು. ಪೂರ್ವದಲ್ಲಿ ನಾಮವಿಲ್ಲದ ಗುರು, ಹೆಸರಿಲ್ಲದ ಲಿಂಗ, ಹೆಸರಿಲ್ಲದ ಶಿಷ್ಯ- ಈ ತ್ರಿವಿಧಸ್ಥಲವನರಿಯದೆ ಕೆಟ್ಟರು ಗುಹೇಶ್ವರಾ.