ವಚನ - 641     
 
ವಸ್ತುಕ ವರ್ಣಕ ಭೂತಿಕ ತ್ರಿಸ್ಥಾನದ ಮೇಲೆ ನುಡಿವ ನುಡಿಗಳು ಇತ್ತಿತ್ತಲಲ್ಲದೆ ಅತ್ತತ್ತಲಾರು ಬಲ್ಲರು. ಇವರೆತ್ತಲೆಂದರಿಯರು. ಗಿಳಿವಿಂಡುಗೆಡೆವರು ನಿಮ್ಮನೆತ್ತ ಬಲ್ಲರು ಗುಹೇಶ್ವರಾ?