Index   ವಚನ - 664    Search  
 
ಆರು ಬಣ್ಣದ ಮೃಗವು ತೋರಿಯಡಗಿತ್ತು. ಬಯಲ ಮೂರು ಲೋಕದೊಳಗೆ ಸಾರಿ, ಹೆಜ್ಜೆಯ ನೋಡಿ ತೊರೆಯ ಬೆಂಬಳಿವಿಡಿದು ತೋಹಿನಲ್ಲಿಗೆ ಬಂದಿತ್ತು, ಮೃಗವು. ``ಸೋsಹಂ ಸೋsಹಂ'' ಎನ್ನುತ್ತಿದ್ದಿತ್ತು, ಇಹಪರವ ಮೀರಿ ನಿಂದಿತ್ತು. ತೋರಲಿಲ್ಲದ ಬಿಲ್ಲು ಬೇರೆನಿಸದ ಬಾಣ, ಅರುಹಿನ ಕೈಯಲ್ಲಿ ಕುರುಹ ಬಾಣಸವ ಮಾಡಿ ತೆರಹಿಲ್ಲದ ಪಾಕದಲ್ಲಿ ಅಡಿಗೆಯ ಮಾಡಿದ ಬೋನವ ಅರ್ಪಿತವ ಮಾಡಿದ ಪ್ರಸಾದದಿಂದ ಸುಖಿಯಾದೆ ಗುಹೇಶ್ವರಾ.