ವಚನ - 678     
 
ಕಡಲ ಮೇಲಣ ಕಲ್ಲು, ಸಿಡಿಲು ಹೊಯ್ದ ಬಾವಿ! ತಡದ ರಕ್ಕಸಿಯ ಮಗಳು ಅಡವಿಯಲ್ಲಿ ಮಡಿದಳು. ತೊಡೆಯಬಾರದ ಲಿಪಿಯ ಬರೆಯಬಾರದು ನೋಡಾ! ನಡುನೀರ ಜ್ಯೋತಿಯ ವಾಯುವ ಕೊನೆಯಲ್ಲಿ ನೋಡಾ! ಮೊದಲಿಲ್ಲದ ನಿಜ, ಕಡೆಯಿಲ್ಲದ ನಡು, ಏನೂ ಇಲ್ಲದ ಊರೊಳಗೆ ಹಿಡಿದಡೆ ನುಂಗಿತ್ತು ನೋಡಾ ಹೆಮ್ಮಾರಿ ಗುಹೇಶ್ವರಾ.