ವಚನ - 683     
 
ಕರ್ಪುರದ ಗಿರಿಯ ಉರಿ ಹಿಡಿದಡೆ ಇದ್ದಿಲುಂಟೆ? ಮಂಜಿನ ಶಿವಾಲಯಕ್ಕೆ ಬಿಸಿಲ ಕಳಸವುಂಟೆ? ಕೆಂಡದ ಗಿರಿಯನರಗಿನ ಬಾಣದಲೆಚ್ಚಡೆ, ಮರಳಿ ಬಾಣವನರಸಲುಂಟೆ? ಗುಹೇಶ್ವರನೆಂಬ ಲಿಂಗವನರಿದು ಮರಳಿ ನೆನೆಯಲುಂಟೆ?