Index   ವಚನ - 696    Search  
 
ಅಂಗ ಅನಂಗವೆಂಬೆರಡೂ ಅಳಿದು ನಿಜದಲ್ಲಿ ನಿಂದ ಲಿಂಗೈಕ್ಯನ ಅಂಗದಲುಳ್ಳ ಕ್ರೀಗಳೆಲ್ಲವೂ ಲಿಂಗಕ್ರೀಗಳು ನೋಡಾ. ಮನೋಲಯವಾಗಿಪ್ಪ ನಿಜ ಲಿಂಗೈಕ್ಯನ ಅನುಭಾವವೆಲ್ಲವೂ ಜ್ಞಾನನಷ್ಟ ಶಬ್ದ ನೋಡಾ. ತನ್ನಲ್ಲಿ ತಾನು ತದ್ಗತವಾಗಿಪ್ಪ ಶಿವಯೋಗಿಗೆ ಭಿನ್ನವಿಲ್ಲ ನೋಡಾ - ಗುಹೇಶ್ವರ ಸಾಕ್ಷಿಯಾಗಿ.