ವಚನ - 7     
 
ಅಯ್ಯಾ, ಜಲ, ಕೂರ್ಮ, ಗಜ, ಫಣಿಯ ಮೇಲೆ ಧರೆ ವಿಸ್ತರಿಸಿ ನಿಲ್ಲದಂದು, ಗಗನವಿಲ್ಲದಂದು, ಪವನನ ಸುಳುಹು ಇಲ್ಲದಂದು, ಅಗ್ನಿಗೆ ಕಳೆಮೊಳೆದೋರದಂದು, ತರು ಗಿರಿ ತೃಣ ಕಾಷ್ಠಾದಿಗಳಿಲ್ಲದಂದು, ಯುಗ ಜುಗ, ಮಿಗಿಲೆನಿಸಿದ ಹದಿನಾಲ್ಕು ಭುವನ ನೆಲೆಗೊಳ್ಳದಂದು, ನಿಜವನರಿದಿಹೆನೆಂಬ ತ್ರಿಜಗಾಧಿಪತಿಗಳಿಲ್ಲದಂದು, ತೋರುವ ಬೀರುವ ಪರಿ ಇಲ್ಲದಂದು, ಆ ಭಾವದಲ್ಲಿ ಭರಿತ, ಆಗಮ್ಯ ಗುಹೇಶ್ವರ ನಿರಾಳವು!

C-391 

  Sat 11 Nov 2023  

 ವಚನಕ್ಕೆ ಅರ್ಥ ವಿಶ್ಲೇಷಣೆ ಕೊಟ್ಟರೆ ಬಹಳ ಉಪಯುಕ್ತವಾಗುತ್ತದೆ
  Jayadevi