Index   ವಚನ - 702    Search  
 
ಅಂಗದ ಮೇಲಣ ಲಿಂಗವ ಹಿಂಗಿದಾತನ ಭವಿಯೆಂಬರು, ಅಂಗದ ಮೇಲಣ ಲಿಂಗವು ಇಪ್ಪಾತನ ಭಕ್ತನೆಂಬರು, ಅಂಗದೊಳಗೆ ಬೆರಸಿಪ್ಪ ಲಿಂಗದ ಹೊಲಬನರಿಯದೆ. ಲಿಂಗವಿಲ್ಲದೆ ಒಂದು ಕ್ಷಣ ಒಂದಂಗ ಸುಳಿದುದುಂಟೆ ಜಗದೊಳಗೆ? ಅಂಗದೊಳಗಣ ಲಿಂಗವನು ಹಿಂಗಿದವರಿಗೆ ಭವಮಾಲೆಯುಂಟು, ಹಿಂಗದವರಿಗೆ ಭವಮಾಲೆಯಿಲ್ಲ ಗುಹೇಶ್ವರಾ.