ವಚನ - 703     
 
ಅಂಗದ ಮೇಲಣ ಲಿಂಗವ ಹಿಂಗಿ ಸ್ಥಾವರಲಿಂಗಕ್ಕೆರಗುವ ಭಂಗಿತರ ಮುಖವ ನೋಡಲಾಗದು. ಅದೆಂತೆಂದಡೆ; ತನ್ನ ಗಂಡನ ಬಿಟ್ಟು ಅನ್ಯ ಗಂಡರಿಗೆರಗುವ ಹಾದರಗಿತ್ತಿಯಂತೆ ಅವಂದಿರ ಭಕ್ತಿ. ಅಂತಪ್ಪ ಪಂಚಮಹಾಪಾತಕರ ಮುಖದತ್ತ ತೋರದಿರಾ ಗುಹೇಶ್ವರಾ.