Index   ವಚನ - 714    Search  
 
ಅಂಗವಿಕಾರ ಆಚಾರದೊಳಡಗಿ, ಆಚಾರಕ್ರೀಗಳು ಗುರುವಿನೊಳಡಗಿ, ಗುರುವೆನ್ನ ಅಂಗದೊಳಗಡಗಿ; ಅಂಗ ಲಿಂಗನಿಷ್ಠೆಯೊಳಡಗಿ, ಲಿಂಗನಿಷ್ಠೆ ಅಂಗದಾಚರಣೆಯ ಆಚಾರವಾವರಸಿ, ಆಚಾರದ ನಿಲವ ಗುರುಮೂರ್ತಿಯಾವರಸಿ, ಗುರುಮೂರ್ತಿಯ ಸರ್ವಾಂಗವಾವರಸಿ, ಸರ್ವಾಂಗವ ಲಿಂಗನಿಷ್ಠೆಯಾವರಿಸಿ, ಲಿಂಗನಿಷ್ಠೆಯ ಸಾವಧಾನವಾವರಿಸಿ, ಸಾವಧಾನವ ಸುವಿಚಾರವಾವರಿಸಿ, ಸುವಿಚಾರವ ಮಹಾಜ್ಞಾನವಾವರಿಸಿ, ಮಹಾಜ್ಞಾನದೊಳಗೆ ಪರಮಾನಂದ ನಿಜನಿಂದು, ನಿಜದೊಳಗೆ ಪರಮಾಮೃತ ತುಂಬಿ, ಮೊದಲ ಕಟ್ಟೆಯನೊಡೆದು, ನಡುವಣ ಕಟ್ಟೆಯನಾಂತು ನಿಂದು, ನಡುವಣ ಕಟ್ಟೆಯೂ ಮೊದಲ ಕಟ್ಟೆಯೂ ಕೂಡಿ ಬಂದು, ಕಡೆಯಣ ಕಟ್ಟೆಯನಾಂತುದು. ಈ ಮೂರುಕಟ್ಟೆಯೊಡೆದ ಮಹಾಜಲವನು ಪರಮಪದವಾಂತುದು. ಆ ಪದದಲ್ಲಿ ನಾನು ಎರಗಿ, ಪಾದೋದಕವ ಕೊಂಡು ಎನ್ನ ನಾನರಿಯದಾದೆ ಕಾಣಾ ಗುಹೇಶ್ವರಾ.