Index   ವಚನ - 727    Search  
 
ಅಂಡಜವ ಮೇಲು ಮಾಡಿ ಪಿಂಡಿಯಾಗಿ, ಆ ಅಂಡದೊಳಗೆ ನಾಲ್ಕು ಕೈಕರಣ ಅನೇಕ ಉದ್ದವಾದವು! ಆ ಕೈಕರಣದೊಳಗೊಬ್ಬ ಶರಣ, ದಾಸೋಹಮೆನಲು, ಆ ಕ್ಷಣ ಒಂದು ಸೋಜಿಗ ಮೂಡಿತ್ತ ಕಂಡೆ ಗುಹೇಶ್ವರಾ.