ವಚನ - 732     
 
ಅಂದಾದಿ ಬಿಂದುವಿಲ್ಲದಂದು ಅಂದಾ ಜೀವನೆಲ್ಲಿಪ್ಪುದೊ? ಪಿಂಡ ರೂಪಿಸುವಲ್ಲಿ ಆ ಜೀವ ಬಂದು ಪರಿಯೆಂತುಟೊ? ಇದನರಿದಡೆ ಗುರುವೆಂಬೆ, ಲಿಂಗವೆಂಬೆ, ಜಂಗಮವೆಂಬೆ, ಅಲ್ಲದಿದ್ದಡೆ ನರನೆಂಬೆ ಕಾಣಾ ಗುಹೇಶ್ವರಾ.