ವಚನ - 736     
 
ಅಂಬುಧಿಯೊಳಗಾದ ನದಿಗಳು ಮರಳುವುವೆ? ಉರಿಯೊಳಗಾದ ಕರ್ಪುರ ರೂಪಿಂಗೆ ಬಪ್ಪುದೆ? ಮರುತನೊಳಗಾದ ಪರಿಮಳ ಲೇಪನಕ್ಕೆ ಬಪ್ಪುದೆ? ಲಿಂಗವನರಿದು ಲಿಂಗೈಕ್ಯವಾದ ಶರಣ ಮರಳಿ ಹುಟ್ಟುವನೆ ಗುಹೇಶ್ವರಾ?