Index   ವಚನ - 739    Search  
 
ಅಕಲ್ಪಿತ ನಿತ್ಯ ನಿರಂಜನ ನಿಸ್ಸೀಮ ನಿರವಯ ಅಖಂಡ ಪರಿಪೂರ್ಣ ಪರಂಜ್ಯೋತಿಯಾದ ಮಹಾ ಘನವಸ್ತುವಿನಲ್ಲಿ ಪರಮಾತ್ಮನುತ್ಪತ್ತಿ. ಆ ಪರಮಾತ್ಮನಿಂದ ಅಂತರಾತ್ಮನುತ್ಪತ್ತಿ. ಆ ಅಂತರಾತ್ಮನಿಂದ ಜೀವಾತ್ಮನುತ್ಪತ್ತಿ. ಈ ತ್ರಯಾತ್ಮರೊಳಗೆ ಜೀವ-ಅಂತರಾತ್ಮಾದಿಗಳೆ ಪಾಶಬದ್ಧರು. ಪರಮಾತ್ಮನೆ ಪಾಶಮುಕ್ತನು. ಈ ಸಂಚವನರಿದ ದ್ವಂದ್ವರಹಿತ ತಾನೆ ನಮ್ಮ ಗುಹೇಶ್ವರಲಿಂಗದಲ್ಲಿ ಯಂತ್ರವಾಹಕನೆನಿಸುವನು.