ವಚನ - 751     
 
ಅತ್ತಲಿಂದ ಒಂದು ಪಶುವು ಬಂದು, ಇತ್ತಲಿಂದ ಒಂದು ಪಶುವು ಬಂದು, ಒಂದರ ಮೋರೆಯನೊಂದು ಮೂಸಿ ನೋಡಿದಂತೆ, ಗುರುವು ಗುರುವಿನೊಳಗೆ ಸಂಬಂಧವಿಲ್ಲ ಶಿಷ್ಯರು ಶಿಷ್ಯರೊಳಗೆ ಸಂಬಂಧವಿಲ್ಲ, ಭಕ್ತರಲಿ ಭಕ್ತರಲಿ ಸಂಬಂಧವಿಲ್ಲ. ಈ ಕಲಿಯುಗದೊಳಗುಪದೇಶವ ಮಾಡುವ ಹಂದಿಗಳಿರಾ ನೀವು ಕೇಳಿರೊ, ಗಂಡಗೆ ಗುರುವಾದಡೆ ಹೆಂಡತಿಗೆ ಮಾವನೆ? ಹೆಂಡತಿಗೆ ಗುರುವಾದಡೆ ಗಂಡಂಗೆ ಮಾವನೆ? ಗಂಡ ಹೆಂಡತಿಗೆ ಗುರುವಾದಡೆ ಇವರಿಬ್ಬರೇನು ಒಡಹುಟ್ಟಿದರೆ? ಈ ಭೇದವನರಿಯದೆ ದೀಕ್ಷೆ ಕಾರಣವ ಮಾಡುವಾತ ಗುರುವಲ್ಲ. ಈ ಕಳೆಯ ಕುಲವನರಿಯದಾತ ಶಿಷ್ಯನಲ್ಲ. ಈ ಭೇದವನರಿದು ಕಾರಣ್ಯವ ಮಾಡುವ ಗುರುಶಿಷ್ಯ ಸಂಬಂಧವೆಲ್ಲ ಉರಿ ಕರ್ಪುರ ಸಂಯೋಗದಂತಹುದು ಕಾಣಾ ಗುಹೇಶ್ವರಾ.