ವಚನ - 752     
 
ಅದೃಷ್ಟ ಕರಣದ ಮೇಲಣ ಪೂರ್ವಾಶ್ರಯವ ಕಳೆದು, ಗುರುವಿನ ಹಸ್ತ ಮುಟ್ಟಿತ್ತೆಂಬ ಸಂದಣಿಯಲ್ಲಿ ಹೋಗದು. ಪಂಚೇಂದ್ರಿಯ ಲಿಖಿತವ ತೊಡೆದು, ಲಿಂಗ ಲಿಖಿತವ ಬರೆವುದು ಶಿಷ್ಯನ ಕೈಯಲ್ಲಲ್ಲದೆ ಗುರುವಿನ ಕೈಯಲಾಗದು. ಭವಿ ಮಾಡುವ ಬೋನವ, ಭಕ್ತ ಕಾಣದ ಹಾಗೆ ಅರ್ಪಿಸುವ ಭೇದವರಿದು, ಪ್ರಸಾದದ ಪೂರ್ವಾಶ್ರಯವ ಕಳೆದು, ರೂಪಿಸಬಲ್ಲೆವೆಂದಡೆ ಹರಿಯದು. ಗುರುವಿಲ್ಲದ ಶಿಷ್ಯ ಶಿಷ್ಯನಿಲ್ಲದ ಗುರು ಇಂತೀ ಒಂದಕ್ಕೊಂದು ಇಲ್ಲದೆ, ಗುಹೇಶ್ವರಲಿಂಗದಲ್ಲಿ ಸಹಜದುದಯವಾದ ನಮ್ಮ ಚೆನ್ನಬಸವಣ್ಣಂಗೆ ನಮೋ ನಮೋ ಎಂಬೆನು.