ವಚನ - 755     
 
ಅನಂತಕೋಟಿ ಪ್ರಕಾಶವೆಂದು ಗಣಿಸಬಾರದ ಬ್ರಹ್ಮದಾ ಬೆಳಗು, ನೋಡಬಾರದ ಘನವು ತೆರಹಿಲ್ಲದ ಬೆಳಗು, ಮಹಾಬೆಳಗು! ತನ್ನಿಂದ ತಾನಾದ ಸ್ವಯ ಸುಖದ ನಿಜ, ನಿತ್ಯ ನಿಜ; ರೂಪು ನಿರಂಜನ, ನಿಗಮಕ್ಕತೀತ! ಹರಿಯಜರಿಗೆಟುಕದ ಜ್ಯೋತಿರ್ಮಯ ತಾನೆ ಲೀಲೆಗೆ ಮೂಲವಾದ. ಗುಹೇಶ್ವರಲಿಂಗ ಘನಕ್ಕೆ, ಘನವಾದುದು!