Index   ವಚನ - 758    Search  
 
ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ, ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ ಮಗನು ಪೃಥ್ವಿ. ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ.