ವಚನ - 767     
 
ಅಮರದ ಹೊಲಬನರಿಯದೆ ಜಗವೆಲ್ಲ ಬರಡಾಯಿತ್ತು. ಅಂಗದ ಹೊಲಬನರಿಯದೆ ಯೋಗ ಭಂಗವಾಯಿತ್ತು. ಸಂಗದ ಹೊಲಬನರಿಯದೆ ಶರಣರು ಭಂಗಿತರಾದರು. ಲಿಂಗದ ಹೊಲಬನರಿಯದೆ ಭಕ್ತ ಶೀಲವಂತನಾದ. ಆದಿ ಮಧ್ಯಾವಸಾನದಲ್ಲಿ ಗುಹೇಶ್ವರನೆಂಬ ಲಿಂಗವು, ಅರಿವಿನ ಮರೆಯಲ್ಲಿಹುದನಾರೂ ಅರಿಯರಲ್ಲಾ!