Index   ವಚನ - 771    Search  
 
ಅಯ್ಯಾ! ಆಚಾರವಿಲ್ಲದ ಜಂಗಮದಲ್ಲಿ ಪಾದೋದಕ ಪ್ರಸಾದವ ಕೊಳಲಾಗದು. ಆಚಾರವಿಲ್ಲದ ಜಂಗಮ[ವ] ದೇವರೆಂದು ಭಾವಿಸಲಾಗದು. `ಆಚಾರಶೂನ್ಯಂ ಚ ಭೂತಪ್ರಾಣೀ' ಎಂದುದಾಗಿ ಆಚಾರವಿಲ್ಲದ ಅನಾಮಿಕರ ಕೈಯಲ್ಲಿ ಪಾದೋದಕ ಪ್ರಸಾದ ಉಪದೇಶವ ಕೊಂಡವಂಗೆ ಅಘನಾಸ್ತಿಯಾಗದು, ಮುಂದೆ ಅಘೋರನರಕ ತಪ್ಪದು ಕಾಣಾ ಗುಹೇಶ್ವರಾ.