Index   ವಚನ - 776    Search  
 
ಅಯ್ಯಾ! ಎತ್ತಿದ ಮಾಣಿಕ್ಯದ ಮಣಿ ಮುಕುಟದ ಮೇಲೆ ಸುತ್ತಿದ ನಾಗಭೂಷಣದ ಪಡೆಯೊಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ಕರೋಟಿ ಮಾಲೆಯೊಳಗಿಪ್ಪ ರುದ್ರರು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ರುಂಡಮಾಲೆಯೊಳಗಿಪ್ಪ ರುಂಡಧಾರಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಉಟ್ಟ ಗಜ ಚರ್ಮದೊಳಗಿಪ್ಪ ಋಷಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಖಟ್ವಾಂಗದೊಳಗಿಪ್ಪ ಮನುಮುನಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಗಂಗೆ ಗೌರಿ ಭೃಂಗಿ ಮೊದಲಾಗಿ ಶಿವನಿಪ್ಪ ನೆಲೆಯನರಿಯರು, ಗುಹೇಶ್ವರ ನಿಮ್ಮ ಶರಣ ಸಂಗನಬಸವಣ್ಣ ಬಲ್ಲ.