Index   ವಚನ - 778    Search  
 
ಅಯ್ಯಾ, ಕ್ರಿಯಾಚಾರದಲ್ಲಿ ಮೋಹವುಳ್ಳಾತನ ಸದ್ಗುರುವೆಂಬೆ ನೋಡ. ಜ್ಞಾನಾಚಾರದಲ್ಲಿ ನೈಷ್ಟೆಯುಳ್ಳಾತನ ಸಚ್ಚಿದಾನಂದಲಿಂಗವೆಂಬೆ ನೋಡ. ಭಾವಾಚಾರದಲ್ಲಿ ಪ್ರೇಮವುಳ್ಳಾತನ ಪರಾತ್ಪರಜಂಗಮವೆಂಬೆ ನೋಡ. ಈ ತ್ರಿವಿಧಾಚಾರದಲ್ಲಿ ಕಾಂಕ್ಷೆಯುಳ್ಳಾತನ ನಿಜಶರಣನೆಂಬೆ ನೋಡ. ಇಂತು ಆಚಾರಸನ್ಮಾರ್ಗ ಗುರುಲಿಂಗಜಂಗಮಶರಣರೆ ಗುಹೇಶ್ವರಲಿಂಗಕ್ಕೆ ಮೋಕ್ಷಮಂದಿರವೆಂಬೆ ನೋಡಾ, ಚೆನ್ನಬಸವಣ್ಣಾ.