Index   ವಚನ - 812    Search  
 
ಅಯ್ಯಾ! ಸಮಸ್ತ ಆತ್ಮರು ರತಿಸಂಯೋಗದಿಂದ ಗರ್ಭಿಣಿಯಾದಲ್ಲಿ ಹೆಣ್ಣು ಗಂಡೆಂಬ ನಾಮ-ರೂಪ-ಕ್ರಿಯೆಗಳು ಕಾಣಿಸಿಕೊಳ್ಳದಂತೆ, ಬಾಲ ಶಿಶುವಿನೊಳಗೆ ಯೌವನವಡಗಿರ್ಪಂತೆ, ಆ ಯೌವನದೊಳಗೆ ಮುಪ್ಪು ಅಡಗಿರ್ಪಂತೆ, ಆ ಮುಪ್ಪಿನೊಳಗೆ ಜನನ-ಮರಣ-ಸ್ಥಿತಿ ಅಡಗಿರ್ಪಂತೆ, ಆ ಜನನ ಮರಣ ಸ್ಥಿತಿಯೊಳಗೆ ಸಕಲ ಭೋಗಂಗಳಡಗಿರ್ಪಂತೆ, ಸರ್ವಜೀವದಯಾಪರತ್ವವುಳ್ಳ ಸದ್ಭಕ್ತ ಶಿವಶರಣಗಣಂಗಳಲ್ಲಿ ಮುಗಿಲ ಮರೆಯ ಸೂರ್ಯನಂತೆ, ನೆಲದ ಮರೆಯ ನಿಧಾನದಂತೆ; ಒರೆಯ ಮರೆಯ ಅಲಗಿನಂತೆ, ಹಣ್ಣಿನ ಮರೆಯ ರಸದಂತೆ ಪರಮ ಪಾವನಮೂರ್ತಿ ನಿರವಯಘನವನೊಡಗೂಡಿ ಏಕಸ್ವರೂಪಿನಿಂದ ಗುಹೇಶ್ವರಲಿಂಗವು ತಾನು ತಾನಾಗಿರ್ದುದನೇನೆಂಬೆನಯ್ಯ ಚೆನ್ನಬಸವಣ್ಣ.