ವಚನ - 818     
 
ಅರಸುವ ಬಳ್ಳಿ ಕಾಲ ಸುತ್ತಿತ್ತೆಂಬಂತೆ, ಬಯಸುವ ಬಯಕೆ ಕೈಸಾರಿದಂತೆ, ಬಡವ ನಿಧಾನವನೆಡಹಿ ಕಂಡಂತೆ, ನಾನರಸುತ್ತಲರಸುತ್ತ ಬಂದು ಭಾವಕ್ಕಗಮ್ಯವಾದ ಮೂರ್ತಿಯ ಕಂಡೆ ನೋಡಾ. ಎನ್ನ ಅರಿವಿನ ಹರುಹ ಕಂಡೆ ನೋಡಾ. ಎನ್ನ ಒಳಹೊರಗೆ ಎಡೆದೆರಹಿಲ್ಲದೆ ಥಳಥಳಿಸಿ ಬೆಳಗಿ ಹೊಳೆವುತಿಪ್ಪ ಅಖಂಡ ಜ್ಯೋತಿಯ ಕಂಡೆ ನೋಡಾ! ಕರುಹಳಿದ ಕರಸ್ಥಲದ ನಿಬ್ಬೆರಗಿನ ನೋಟದ ಎನ್ನ ಪರಮಗುರುವ ಕಂಡು ಬದುಕಿದೆನು ಕಾಣಾ ಗುಹೇಶ್ವರಾ.