Index   ವಚನ - 822    Search  
 
ಅರಿದ ಶರಣಂಗೆ ಆಚಾರವಿಲ್ಲ, ಆಚಾರವುಳ್ಳವಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ಸುಳುಹು ಜಗಕ್ಕೆ ವಿಪರೀತ, ಚರಿತ್ರವದು ಪ್ರಕಟವಲ್ಲ ನೋಡಾ! ಸಂಸಾರಿ ಬಳಸುವ ಬಯಕೆಯನೆಂದೂ ಹೊದ್ದನು. ಸಟೆಯ ಹಿಡಿದು ದಿಟವ ಮರೆದು, ಇಲ್ಲದ ಲಿಂಗವನು ಉಂಟೆಂದು ಪೂಜಿಸುವರಾಗಿ ಆಚಾರವುಂಟು, ಆಚಾರವುಳ್ಳವಂಗೆ ಗುರುವುಂಟು, ಗುರುವುಳ್ಳವಂಗೆ ಲಿಂಗವುಂಟು, ಲಿಂಗಪೂಜಕಂಗೆ ಭೋಗವುಂಟು. ಈ ಬರಿಯ ಬಾಯ ಬಣ್ಣಕರೆಲ್ಲರೂ ಪೂಜಕರಾದರು. ಗುಹೇಶ್ವರಲಿಂಗವು ಅಲ್ಲಿ ಇಲ್ಲವೆಂಬುದನು; ಈ ವೇಷಲಾಂಛನರೆತ್ತ ಬಲ್ಲರು ಹೇಳಾ ಸಂಗನಬಸವಣ್ಣ.