ವಚನ - 828     
 
ಅರಿವನರಿದು ಮರಹ ಮರೆದು, ಸಂಕಲ್ಪ ಸಂಶಯವಳಿದ ನಿಲವನು, ಅರಿದ ಪರಿ ಎಂತು ಹೇಳಾ? ಅರಿದೆನೆಂದಡೆ ಜ್ಞಾನಕ್ಕೆ ದೂರ, ಅರಿದೆ ಮರೆದೆನೆಂದಡೆ ಉಪಮೆಗೆ ದೂರ. ನಿರ್ಭಾವದ ಹೊಲಿಗೆಯಲ್ಲಿ ಭಾವಸಂಕಲ್ಪ ಬಿಡದು. ನಮ್ಮ ಗುಹೇಶ್ವರಲಿಂಗದಲ್ಲಿ ಮನಮಗ್ನಯೋಗ, ನಿನಗೆಂತು ಸಾಧ್ಯವಾಯಿತ್ತು ಹೇಳಾ ಸಿದ್ಧರಾಮಯ್ಯಾ?