ವಚನ - 830     
 
ಅರಿವರತು ಬೆರಗುಹೊಡೆದು, ಕುರುಹುಗೆಟ್ಟವನ, ಬಂದ ಬಟ್ಟೆಯಲ್ಲಿ ಬಾರದೆ ಹೋದವನ, ಕಂಗಳಲುಂಡವನ, ಮನದಲ್ಲಿ ದಣಿದವನ, ಕಿಚ್ಚಿಲ್ಲದೆ ಬೆಂದವನ, ಅಚ್ಚಲಿಂಗೈಕ್ಯನ, ಕೈಯಿಲ್ಲದೆ ಕೊಂಡವನ, ಬಾಯಿಲ್ಲದೆ ಉಂಡವನ, ಒಡಲಿಲ್ಲದೆ ಅವಗ್ರಹಿಸಿದವನ-ನಂಬು ಗುಹೇಶ್ವರಲ್ಲಮನ!