ವಚನ - 839     
 
ಅರಿವು ಮರವೆಯನರಿದು ನೆರೆ ನಿಂದ ನಿಜವನಾರು ಬಲ್ಲರೊ? ಭಾವ ನಿರ್ಭಾವವ ಮೀರಿದ ಮಹಾಘನವ ಭಾವಿಸುವರಿನ್ನಾರೊ? ಅದು ಭಾವಕ್ಕತೀತವಾಗಿ ಭಾವಿಸಲಿಲ್ಲ, ಮನಕ್ಕೆ [ಅ]ಗೋಚರವಾಗಿ ನೆನೆಯಲಿಲ್ಲ. ಅರಿವುದಕ್ಕೆ ಕುರುಹಿಲ್ಲ, ಮರೆವುದಕ್ಕೆ ತೆರಹಿಲ್ಲ. ಜ್ಞಾತೃ, ಜ್ಞಾನ, ಜ್ಞೇಯವಳಿದು ನಿಃಪತಿ, ಗುಹೇಶ್ವರಾ ನಿಮ್ಮ ಶರಣ, ನಿಶ್ಚಿಂತನಿವಾಸಿಯಾದನು.