ವಚನ - 852     
 
ಅಹುದಹುದು, ಭಕ್ತಿಭಾವದ ಭಜನೆ ಎಂತಿರ್ದುದಂತೆ ಅಂತರಂಗದಲ್ಲಿ ಅರಿವು. ಆ ಅಂತರಂಗದ ಅರಿವಿಂಗೆ ಆಚಾರವೆ ಕಾಯ. ಆಚಾರವೆಂಬ ಕಾಯವಿಲ್ಲದಡೆ ಅರಿವಿಂಗೆ ಆಶ್ರಯವಿಲ್ಲ. ಅರಿವು ಆಚಾರದಲ್ಲಿ ಸಮವೇಧಿಸಿದ ಲಿಂಗೈಕ್ಯನ ಕ್ರಿಯಾಬದ್ಧನೆಂದು ನುಡಿದಡೆ ಪಂಚಮಹಾಪಾತಕ. ನಿನ್ನ ಅರಿವಿಂಗೆ ಆಚಾರವಾಗಿ, ಆಚಾರಕ್ಕೆ ಆಳಾಗಿ ನಮ್ಮ ಗುಹೇಶ್ವರನು ನಿನ್ನ ಕೈವಶಕ್ಕೆ ಒಳಗಾದನು ನಿನ್ನ ಸುಖಸಮಾಧಿಯ ತೋರು, ಬಾರಾ ಸಿದ್ಧರಾಮಯ್ಯ.