ವಚನ - 86     
 
ಹಳೆಗಾಲದಲಿ ಒಬ್ಬ ಪುರುಷಂಗೆ, ಎಳೆಯ ಕನ್ನಿಕೆಯ ಮುದುವೆಯ ಮಾಡಲು, ಕೆಳದಿಯರೈವರು ನಿಬ್ಬಣ ಬಂದರು. ಹಸೆಯ ಮೇಲೆ ಮದವಣಿಗನ ತಂದು ನಿಲಿಸಲೊಡನೆ, ಶಶಿವದನೆ ಬಂದು ಕೈಯ ಪಿಡಿದಳು. ಮೇಲುದಾಯದಲ್ಲೊಬ್ಬ ಸತಿ ಕಣ್ಣು ಸನ್ನೆಯ ಮಾಡುತ್ತಿರೆ, ಕೂಡೆ ಬಂದ ನಿಬ್ಬಣಗಿತ್ತಿಯರೆಲ್ಲ ಹೆಂಡತಿಯರಾದರು! ದೂರವಿಲ್ಲದ ಗಮನಕ್ಕೆ ದಾರಿಯ ಪಯಣ ಹಲವಾಯಿತ್ತು. ಸಾರಾಯ ನಿರ್ಣಯವನೇನೆಂಬೆ ಗುಹೇಶ್ವರಾ.