ವಚನ - 861     
 
ಆಕಾಶವನಡರುವಂಗೆ ಅಟ್ಟಗೋಲ ಹಂಗೇಕೊ? ಸಮುದ್ರವ ದಾಟುವಂಗೆ ಹರಿಗೋಲ ಹಂಗೇಕೊ? ಸೀಮೆಯ ಮೀರಿದ ನಿಸ್ಸೀಮಂಗೆ ಸೀಮೆಯ ಹಂಗೇಕೊ? ಗುಹೇಶ್ವರಲಿಂಗದಲ್ಲಿ ನಿಸ್ಸೀಮ ಸಿದ್ಧರಾಮಯ್ಯದೇವರಿಗೆ ಲಿಂಗವೆಂದೇನು ಹೇಳಾ ಚೆನ್ನಬಸವಣ್ಣಾ?