ವಚನ - 875     
 
ಆದಿ ಅನಾದಿಗಳಿಲ್ಲದಂದಿನ ಕೂಗು; ನಾದ ಬಿಂದುಗಳಿಲ್ಲದಂದಿನ ಕೂಗ ಕಂಡು ಕೂಗಿದೆ! ಇಡಾ ಪಿಂಗಳ ಸುಷುಮ್ನನಾಳಮಧ್ಯದ ಕೂಗ ಕಂಡು ಕೂಗಿದೆ. ಗುಹೇಶ್ವರನೆಂಬ ತಲೆವೊಲನ ದಾಂಟಿ ಅಲ್ಲಮ ಕೂಗಿದ ಕೂಗು.