Index   ವಚನ - 882    Search  
 
ಆದಿಗೆ ಅನಾದಿಗೆ ಭೇದವುಂಟೆ? ಆದಿ ಲಿಂಗ ಅನಾದಿ ಶರಣನೆಂಬುದು, ತನ್ನಿಂದ ತಾ ಮಾಡಲಾಯಿತ್ತು. ಧರೆಯಾಕಾಶ ಭುವನ ಭವನಂಗಳು ಹುಟ್ಟದ ಮುನ್ನ ಅನಾದಿ ಪರಶಿವನು ತಾನೆ ತನ್ನ ಲೀಲೆಗೆ ಸಾಕಾರವ ಧರಿಸಿದಡೆ ಆ ಸಾಕಾರವೆ ಈ ಸಾಕಾರವಾಯಿತ್ತು. ಎನ್ನ ಸಾಕಾರದ ಆದಿಯನೂ, ಎನ್ನ ನಿರಾಕಾರದ ಆದಿಯನೂ ಬಸವಣ್ಣ ಬಲ್ಲವನಾಗಿ, ಗುಹೇಶ್ವರಲಿಂಗದ ಘನವು ಬಸವಣ್ಣನಿಂದೆನಗೆ ಸಾಧ್ಯವಾಯಿತ್ತು ಕಾಣಾ ಚೆನ್ನಬಸವಣ್ಣಾ!