ವಚನ - 894     
 
ಆದಿಯಾಧಾರಮಂ ಮಾಡಿ, ಅಜಕೋಟಿ ಬ್ರಹ್ಮಾಂಡಂಗಳ ಮಾಡಿ, ಈರೇಳು ಭುವನಂಗಳಂ ಮಾಡಿ ಹರ ಲೀಲೆಯಾಡುವಲ್ಲಿ; ಹರಿವಿರಿಂಚಿಗಳ ಸುರಾಸುರರ ಶಿರೋಮಾಲೆಯನಿಕ್ಕಿ ಕುಣಿದಾಡುವಲ್ಲಿ, ಪಾದ ರಸಾತಳಕ್ಕಿಳಿದು ಭುವನ ಜಲಮಯವಾದಲ್ಲಿ ಹಸ್ತ ಮಕುಟ ತಾಗಿ ಸಕಲಲೋಕಂಗಳೆಲ್ಲವೂ ನಿರವಯಲಾದಲ್ಲಿ, ನಿಜದ ಬೆಳಗಿನ ಬೆಳಗಿನೊಳುವ 'ಸೋಹಂ' ಎನಲು, ವಿಚಾರದಿಂದ ಘನಮನವಾದಂದು, ಗುಹೇಶ್ವರಾ ನೀನೆ ಲಿಂಗ, ನಾನೆ ಜಂಗಮ, ಬಸವಣ್ಣನೇ ಭಕ್ತ!