Index   ವಚನ - 898    Search  
 
ಆದಿವಿಡಿದು ಬಹಾತ ಭಕ್ತನಲ್ಲ, ಅನಾದಿವಿಡಿದು ಬಹಾತ ಮಾಹೇಶ್ವರನಲ್ಲ. ಸ್ಥಲವಿಡಿದು ಬಹಾತ ಪ್ರಸಾದಿಯಲ್ಲ, ಇಷ್ಟಲಿಂಗದಲ್ಲಿ ಪ್ರಸಾದವ ಕೊಂಬಾತ ಪ್ರಾಣಲಿಂಗಿಯಲ್ಲ, ಲಿಂಗವಿಡಿದು ಬಹಾತ ಶರಣನಲ್ಲ, ಭಿನ್ನಭಾವವಿಡಿದು ಬಹಾತ ಐಕ್ಯನಲ್ಲ, ಶೂನ್ಯಕಾಯವ ನಿಶ್ಶೂನ್ಯಂಗಿಕ್ಕಿ, ಪ್ರಾಣಲಿಂಗಪ್ರಸಾದವ ಕೊಳಬಲ್ಲನಾಗಿ ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣಂಗೆ ನಮೋ ನಮೋ ಎಂಬೆನು.