ವಚನ - 906     
 
ಆಯಿತ್ತು ಬಸವಾ ನಿನ್ನಿಂದ ಗುರುಸ್ವಾಯತವೆನಗೆ. ಆಯಿತ್ತು ಬಸವಾ ನಿನ್ನಿಂದ ಲಿಂಗಸ್ವಾಯತವೆನಗೆ. ಆಯಿತ್ತು ಬಸವಾ ನಿನ್ನಿಂದ ಜಂಗಮಸ್ವಾಯತವೆನಗೆ. ಆಯಿತ್ತು ಬಸವಾ ನಿನ್ನಿಂದ ಪ್ರಸಾದಸ್ವಾಯತವೆನಗೆ. ಇಂತೀ ಚತುರ್ವಿಧ ಸ್ವಾಯತವನು ನೀನೆ ಆಗುಮಾಡಿದೆಯಾಗಿ ನಮ್ಮ ಗುಹೇಶ್ವರಲಿಂಗಕ್ಕೆ ಆಗು ವಿಳಾಸವಾದೆಯಲ್ಲಾ ಸಂಗನಬಸವಣ್ಣಾ.