ವಚನ - 92     
 
ಆದಿಯಲ್ಲಿ ಅನಾದಿ ಇಲ್ಲದಂದತ್ತ ಬಸವಣ್ಣನುತ್ಪತ್ಯವಾದ ಕಾರಣ ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಮರ್ತ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಗುಹೇಶ್ವರಾ ನಿಮ್ಮಾಣೆ, ಎನಗೆಯೂ ನಿನಗೆಯೂ ಬಸವಣ್ಣನ ಪ್ರಸಾದ.