Index   ವಚನ - 941    Search  
 
ಇಷ್ಟಲಿಂಗದಲ್ಲಿ ವಿಶ್ವಾಸ ಬಲಿದರೆ ಆಯತಲಿಂಗ. ಆ ಇಷ್ಟಲಿಂಗದಲ್ಲಿ ಭಾವಮನೋವೇದ್ಯವಾದಲ್ಲಿ ಸ್ವಾಯತಲಿಂಗ. ಆ ಇಷ್ಟಲಿಂಗದ ಭಾವ ಮನೋವೇದ್ಯವಾದ ಸುಖವು ಭಿನ್ನವಾಗಿ ತೋರದೆ, ಅನುಪಮ ಪರಿಣಾಮ ಭರಿತವಾದಲ್ಲಿ ಸನ್ನಿಹಿತಲಿಂಗ. ಇಂತು, ಇಷ್ಟಲಿಂಗ ಪ್ರಾಣಲಿಂಗ ತೃಪ್ತಿಯ ಭಾವಲಿಂಗಂಗಳೆಂಬ ಲಿಂಗತ್ರಯಂಗಳು, ತನುತ್ರಯಂಗಳ ಮೇಲೆ ಆಯತ ಸ್ವಾಯತ ಸನ್ನಿಹಿತಂಗಳಾದ ಶರಣನ ಪಂಚಭೂತಂಗಳಳಿದು ಲಿಂಗ ತತ್ತ್ವಂಗಳಾಗಿ, ಆತನ ಜೀವ ಭಾವವಳಿದು ಪರಮಾತ್ಮನೆನಿಸಿದಲ್ಲಿ ಷಡಂಗಯೋಗವಾದುದು ಕಾಣಾ ಗುಹೇಶ್ವರಾ.