ವಚನ - 953     
 
ಉದಕದೊಳಗೊಂದು ಸೆಜ್ಜೆಯಾಯಿತ್ತು. ಸೆಜ್ಜೆಯೊಳಗೊಂದು ಕಿಚ್ಚು ಹುಟ್ಟಿತ್ತು. ಇದೇನೊ ಇದೆಂತೊ? ನೀನರಸಿಹೆನೆಂಬ ಸಂಬಂಧವಿಲ್ಲ. ಇದೇನೊ ಇದೆಂತೊ? ನೀನರಿದಿಹೆನೆಂಬ ಸಂಬಂಧವಿಲ್ಲ. ಇದೇನೊ ಇದೆಂತೊ? ನೀನೊಲಿಸಿಹೆನೆಂಬ ಸಂಬಂಧವಿಲ್ಲ. ಉದಯಮುಖದಲ್ಲಿ ಕತ್ತಲೆಯಡಗಿತ್ತು. ಗುಹೇಶ್ವರನೆಂಬ ನಾಮವಲ್ಲಿಯೆ ನಿಂದಿತ್ತು.